ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟ : ಒಂದೇ ದಿನ 67 ವಿದ್ಯಾರ್ಥಿಗಳಿಗೆ ಸೋಂಕು ದೃಢ
ಸೋಮವಾರ, 10 ಜನವರಿ 2022 (20:37 IST)
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿನ್ನೆ ಒಂದೇ ದಿನ ರಾಜ್ಯದಲ್ಲಿ 67 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಂಗಳೂರಿನ ಸುರತ್ಕಲ್ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ 60 ವಿದ್ಯಾರ್ಥಿಗಳು ಹಾಗೂ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿವಿಯ 7 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸುರತ್ಕಲ್ ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ 60 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳನ್ನು ಸಂಸ್ಥೆಯ ಗೆಸ್ಟ್ ಹೌಸ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.