ಕೊರೊನಾ ಎಚ್ಚರಿಕೆ ಮೋದಿ ಭಾಷಣ

ಗುರುವಾರ, 13 ಜನವರಿ 2022 (18:28 IST)
ದೇಶದಲ್ಲಿ ಕೊರೊನಾ ಅಬ್ಬರ ತಡೆಯಲು ಲೋಕಲ್ ಕಂಟೈನ್ ಮೆಂಟ್ ಝೋನ್ ಗಳ ಮೇಲೆ ಹೆಚ್ಚು ನಿಗಾ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
 
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳ ಜೊತೆ ವರ್ಚುವಲ್ ಸಭೆ ನಂತರ ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ತಜ್ಞರ ಅಭಿಪ್ರಾಯದ ಪ್ರಕಾರ ಕೊರೊನಾ ವಿರುದ್ಧದ ಹೋರಾಟಕ್ಕೆ ಲಸಿಕೆ ಒಂದೇ ಮಾರ್ಗವಾಗಿದೆ ಎಂದರು.
ಶೇ.92ರಷ್ಟು ಮೊದಲ ಡೋಜ್ ನೀಡಲಾಗಿದೆ. ಎರಡನೇ ಡೋಜ್ ಕೂಡ ಪ್ರಗತಿಯಲ್ಲಿದೆ. ಕೊರೊನಾ ರೂಪಾಂತರಿ ಒಮಿಕ್ರಾನ್ ಅಬ್ಬರ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಹಲವಾರು ರೂಪಾಂತರಿ ಕೊರೊನಾ ವೈರಸ್ ಹರಡುವ ಸಾಧ್ಯತೆ ಇದ್ದು, ಇದಕ್ಕೆಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಬೇಕಾಗಿದೆ ಎಂದು ಪ್ರಧಾನಿ ಹೇಳಿದರು.
 
ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಹಭಾಗಿತ್ವದಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮ ವಹಿಸಲಾಗುತ್ತಿದೆ. ಲೋಕಲ್ ಕಂಟೈನ್ ಮೆಂಟ್ ಮೇಲೆ ಹೆಚ್ಚು ನಿಗಾ ವಹಿಸಬೇಕು ಹಾಗೂ ಸಾಧ್ಯವಾಷ್ಟು ಅತ್ಯಂತ ವೇಗವಾಗಿ ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಲಾಗಿದೆ ಎಂದರು.
 
ಹೋಂ ಐಸೋಲೇಷನ್ ನಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲು ಆದ್ಯತೆ ನೀಡಲಾಗುತ್ತಿದ್ದು, ಟೆಲಿ ಮೆಡಿಸನ್ ವ್ಯವಸ್ಥೆ ಮೂಲಕ ಚಿಕಿತ್ಸೆಗೂ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ 12 ಲಕ್ಷ ಮಕ್ಕಳಿಗೆ ಆಕ್ಸಿಜನ್ ಇರುವ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. 5 ಲಕ್ಷ ವಿಶೇಷ ಆಂಬುಲೆನ್ಸ್ ವ್ಯವಸ್ಥೆ ಜಾರಿಯಲ್ಲಿದೆ ಎಂದು ಮೋದಿ ವಿವರಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ