ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 18) ಹೊಸದಾಗಿ 214 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,673 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,36,527 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 12 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,953 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,164 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 83 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,501 ಕ್ಕೆ ಏರಿಕೆಯಾಗಿದೆ. 12,49,501 ಸೋಂಕಿತರ ಪೈಕಿ 12,26,541 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,214 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,745 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.