ಕೊರೊನಾ ಭೀತಿ ಹಿನ್ನಲೆ; ರಾಜ್ಯದಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ
ಮಂಗಳವಾರ, 5 ಮೇ 2020 (11:10 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ರಾಜ್ಯದಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂಬ ನಿಯಮವನ್ನು ಜಾರಿಗೆ ತರಲಾಗಿದೆ.
ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಅಟ್ಟಹಾಸ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ಜನರು ಹೊರಗೆ ಬರುವಾಗ ಕನಿಷ್ಠ 1 ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ ಎನ್ನಲಾಗಿದೆ.
ಒಂದು ವೇಳೆ ನಿಯಮ ಉಲ್ಲಂಘಿಸಿದರೆ ದಂಡ ಫಿಕ್ಸ್. ನಗರ ಪ್ರದೇಶದಲ್ಲಿ 200ರೂ.ದಂಡ ವಿಧಿಸಿದರೆ, ಗ್ರಾಮೀಣ ಭಾಗದಲ್ಲಿ 100ರೂ.ದಂಡ ವಿಧಿಸಲಾಗಿದೆ.