ಸರಕಾರದ ಜಿಲ್ಲಾಸ್ಪತ್ರೆ ಇನ್ಮುಂದೆ ಕೊರೊನಾ ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಲಾಗಿದೆ.
ಬಳ್ಳಾರಿ ನಗರದಲ್ಲಿನ ಜಿಲ್ಲಾಸ್ಪತ್ರೆಯು ಸಂಪೂರ್ಣ ನೋವೆಲ್ ಕೊರೊನಾ ಆಸ್ಪತ್ರೆಯಾಗಿ ಇನ್ಮುಂದೆ ಕಾರ್ಯನಿರ್ವಹಿಸಲಿದೆ.
ತಾತ್ಕಾಲಿಕವಾಗಿ ಜಿಲ್ಲಾ ಆಸ್ಪತ್ರೆಯಲ್ಲಿನ ಒಳ ಹಾಗೂ ಹೊರ ರೋಗಿಗಳ ಚಿಕಿತ್ಸೆ ನೀಡುವುದನ್ನು ಮಾ.30ರರಿಂದ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಅಗತ್ಯ ವಸ್ತುಗಳ ಖರೀದಿಗೆ ವೇಳಾಪಟ್ಟಿ ನಿಗದಿ:
ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಿಸುವುದರ ಜೊತೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಸಾರ್ವಜನಿಕರಿಗೆ ಅಗತ್ಯ ವಸ್ತುಗಳಾದ ತರಕಾರಿ, ಹಣ್ಣು, ಹಾಲು, ದಿನಸಿ ವಸ್ತುಗಳು, ಮಾಂಸ, ಮೀನು ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 7 ರಿಂದ 11 ರವರೆಗೆ ಹಾಗೂ ಸಂಜೆ 5 ರಿಂದ 7ರವರೆಗೆ ಸಮಯ ನಿಗದಿಪಡಿಸಿದ್ದಾರೆ.
ನಿಗದಿಪಡಿಸಲಾದ ಸಮಯ ಬಿಟ್ಟು ಉಳಿದ ಸಮಯದಲ್ಲಿ ವಾಹನಗಳು ಹಾಗೂ ಸಾರ್ವಜನಿಕರ ಅನಗತ್ಯ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಕುಲ್ ಆದೇಶ ಹೊರಡಿಸಿದ್ದಾರೆ.