ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,82,970 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 487202 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1831000 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 188157 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35583039 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 76,35,229 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,58,88,47,554 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 18,69,642 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.