ಕೊರೊನಾ ಬಂದ್ರೆ ಮನೇಲಿ ಇರಿ ಗಾಬರಿ ಬೇಡ

ಭಾನುವಾರ, 23 ಜನವರಿ 2022 (17:33 IST)
ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿದರೆ ಇದೀಗ ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ.
ಬೆಂಗಳೂರಿನಲ್ಲೇ ಈವರೆಗೆ ಶೇ.75 ರಿಂದ 80ರಷ್ಟು ಪತ್ತೆಯಾಗುತ್ತಿದ್ದವು. ಆದರೆ, ಈಗ ಬೇರೆ ಬೇರೆ ನಗರಗಳಲ್ಲಿಯೂ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಿದರು. ಇನ್ನೂ ಪಾಸಿಟಿವ್ ಬಂದವ ರನ್ನು ಮನೆಯಿಂದ ಬರಬೇಡಿ ಎಂದು ಪದೇ ಪದೇ ಮನವಿ ಮಾಡಿಕೊಂಡರೂ ಉಪಯೋಗವಾಗುತ್ತಿಲ್ಲ.
 
ಕೆಲವರು ಅನಗತ್ಯವಾಗಿ ತಿರುಗಾಟ ನಡೆಸುವುದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಅಲ್ಲದೆ ಕರ್ನಾಟಕ ಐದಾರು ರಾಜ್ಯ ಗಳ ಜತೆ ಗಡಿಯನ್ನು ಹಂಚಿಕೊಂಡಿದ್ದು, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಂಚಾರ ಮಾಡುವುದರಿಂದ ಸೋಂಕು ಹಬ್ಬುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು. ಇನ್ನೂ ಪಾಸಿಟಿವ್ ಬಂದವರು ಮನೆಯಲ್ಲಿ ಇದ್ದರೆ ಯಾವುದೇ ಸಮಸ್ಯೆ ಇಲ್ಲ. ಇದರಿಂದ ಸೋಂ ಕಿನ ಪ್ರಮಾಣ ಕಡಿಮೆಯಾಗಲಿದೆ. ಪ್ರತಿಯೊಂದು ಕಡೆ ನಾವೇ ನಿಗಾವಹಿಸಬೇಕೆಂದರೆ ಕಷ್ಟಸಾಧ್ಯ. ಜನರಿಗೂ ಇದರ ಬಗ್ಗೆ ಅರಿವಿರ ಬೇಕು ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ