ಅಧಿವೇಶನ ವೇಳೆ ಉಪಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್

ಮಂಗಳವಾರ, 22 ಸೆಪ್ಟಂಬರ್ 2020 (22:43 IST)
ರಾಜ್ಯದ ಉಪಮುಖ್ಯಮಂತ್ರಿಗೆ ಕೋವಿಡ್ -19 ದೃಢಪಟ್ಟಿದೆ.


ಈ ಬಾರಿಯ ವಿಧಾನ ಸಭೆ ಅಧಿವೇಶನವನ್ನು ಕೊರೊನಾ ತಡೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳೊಂದಿಗೆ ನಡೆಸಲಾಗುತ್ತಿದೆ.

ಈ ನಡುವೆ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಕಾಣಿಸಿಕೊಂಡಿದೆ.

ಕೋವಿಡ್-19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢಪಟ್ಟಿದ್ದು, ನನಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್ನಲ್ಲಿರುವಂತೆ ಕೋರುತ್ತೇನೆ ಎಂದು ಡಿಸಿಎಂ ಟ್ವಿಟ್ ಮಾಡಿ ತಿಳಿಸಿದ್ದಾರೆ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ