ಬೆಚ್ಚಿಬಿದ್ದ ಕರ್ನಾಟಕ- 100 ಜನರಲ್ಲಿ ಕೊರೊನಾ ಶಂಕೆ : ಸಿಎಂ ಸ್ಪಷ್ಟನೆ
ರಾಜ್ಯದಲ್ಲಿ 100 ಜನ ಕೊರೊನಾ ಶಂಕಿತರಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ. ಹೀಗಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೊರೊನಾ ತಡೆಗೆ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದಲ್ಲಿ 6 ಜನರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ.
100 ಜನರ ಮೇಲೆ ಶಂಕೆ ವ್ಯಕ್ತವಾಗಿದ್ದು, ಅವರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ. ಸರಕಾರ ಕೊರೊನಾ ತಡೆಯುವಲ್ಲಿ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.