ಕೊರೊನಾ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ

ಸೋಮವಾರ, 9 ಮಾರ್ಚ್ 2020 (10:38 IST)
ಮಂಗಳೂರು : ಕೊರೊನಾ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ಎಸ್ಕೇಪ್ ಆದ ಘಟನೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ.

ಭಾನುವಾರ ತಡರಾತ್ರಿ ದುಬೈನಿಂದ ಮಂಗಳೂರಿನ ಬಂದಿದ್ದ ಈತನನ್ನು ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಿದಾಗ ಜ್ವರ ಇರುವುದು ಕಂಡುಬಂದ ಹಿನ್ನಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ರಾತ್ರೋರಾತ್ರಿ ಐಸೋಲೇಷನ್ ವಾರ್ಡ್ ನಿಂದ ಎಸ್ಕೇಪ್ ಆಗಿದ್ದಾನೆ.

 

ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ