ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿನ್ನೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಇದೀಗ ಅವರ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಬಗ್ಗೆ ಅವರು ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಹಾಗೂ ತನ್ನ ಜೊತೆ ಸಂಪರ್ಕದಲ್ಲಿದ್ದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಮಾಜಿ ಸಿಎಂ ಬಸವ ಕಲ್ಯಾಣ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಏ.13, 14 ಮತ್ತು 15ರಂದು ಬಸವಕಲ್ಯಾಣದಲ್ಲಿ ಪ್ರಚಾರ ಮಾಡಿದ್ದಾರೆ ಎನ್ನಲಾಗಿದೆ.