ಮಾಜಿ ಸಚಿವ ಶಿವರಾಜ್ ತಂಗಡಗಿಗೆ ಕೊರೊನಾ

ಮಂಗಳವಾರ, 20 ಏಪ್ರಿಲ್ 2021 (09:12 IST)
ಬೆಂಗಳೂರು : ಕಾಂಗ್ರೆಸ್ ನಾಯಕ, ಮಾಜಿ ಸಚಿವ ಶಿವರಾಜ್ ತಂಗಡಗಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ಮಸ್ಕಿ ಉಪಚುನಾವಣೆಯಲ್ಲಿ ಸಕ್ರಿಯರಾಗಿದ್ದ ತಂಗಡಗಿ. ಅವರು ಉಪಚುನಾವಣೆ ಬಳಿಕ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರನ್ನು  ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಸೋಂಕು ತಗಲಿರುವುದು ದೃಢಪಟ್ಟಿದೆ.

ಹಾಗಾಗಿ ಅವರು ಸದ್ಯ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೇ ತಮ್ಮ ಸಂಪರ್ಕಕ್ಕೆ ಬಂದವರು ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ