ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ

ಬುಧವಾರ, 31 ಮಾರ್ಚ್ 2021 (13:17 IST)
ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ದೇವೇಗೌಡರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು ಆ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ಬಳಿಕ ಅವರ ಪತ್ನಿ ಚನ್ನಮ್ಮ ಅವರನ್ನು ಟೆಸ್ಟ್ ಗೆ ಒಳಪಡಿಸಲಾಗಿದ್ದು, ಅವರಿಗೂ ಕೂಡ ಪಾಸಿಟಿವ್ ಬಂದಿದೆ ಎನ್ನಲಾಗಿದೆ.

ಹಾಗಾಗಿ ಅವರಿಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು  ಚಿಕಿತ್ಸೆ ನೀಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ