ಕರ್ನಾಟಕದಲ್ಲಿ ಮಕ್ಕಳಿಗೆ ಕೊರೊನಾ ಲಸಿಕಾ ಅಭಿಯಾನ

ಭಾನುವಾರ, 2 ಜನವರಿ 2022 (11:09 IST)
ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ನಡೆಸಲಾಗುವುದು.

ಕರ್ನಾಟಕ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಲಸಿಕಾ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕಾ ಅಭಿಯಾನ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಶನಿವಾರ ಹೇಳಿಕೆ ನೀಡಿದ್ದಾರೆ.

ಶಿಕ್ಷಕರು, ಪೋಷಕರ ಜತೆ ಸಭೆ ನಡೆಸಿ ಹಂತಹಂತವಾಗಿ ಲಸಿಕೆ ನೀಡಲಾಗುವುದು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡುತ್ತೇವೆ. ಮಕ್ಕಳು ಲಸಿಕೆ ಹಾಕಿಸಿಕೊಳ್ಳುವುದರಿಂದ ಸಹಕಾರಿಯಾಗಲಿದೆ.

ಲಸಿಕೆ ಪಡೆಯಲು ನೋಂದಣಿ ಮಾಡಿಸುವುದು ಕಡ್ಡಾಯವಲ್ಲ. ಐಡಿ ಕಾರ್ಡ್ ತೋರಿಸಿ ಸ್ಥಳದಲ್ಲೇ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ವಿವರಣೆ ನೀಡಿದ್ದಾರೆ.

ಲಸಿಕೆ ಪಡೆಯದವರಿಗೆ ಕೊರೊನಾ ಕಾಡುತ್ತಿದೆ. ಈ ಸಾಲಿನಲ್ಲಿ ಮಕ್ಕಳಿದ್ದು, ಅವರ ರಕ್ಷಣೆಗೆ ಲಸಿಕೆ ಸಹಾಯಕಾರಿ ಆಗಲಿದೆ. ಶಾಲೆ ಕಾಲೇಜಿಗೆ ಹೋಗುತ್ತಿರುವ ಮಕ್ಕಳಿಗೆ ಆದ್ಯತೆ ನೀಡಿ ಕೇಂದ್ರ ಸರ್ಕಾರ ಈ ಲಸಿಕಾ ಅಭಿಯಾನ ಆರಂಭಿಸಿದೆ ಎಂದು ಅವರು ತಿಳಿಸಿದ್ದಾರೆ.

ಜನವರಿ 3 ರಿಂದ 15 ವರ್ಷದಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟು 79 ಸಾವಿರ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಲು ತಯಾರಿ ಮಾಡಲಾಗಿದೆ.

ಲಸಿಕೆ ನೀಡಿಕೆ ಬಗ್ಗೆ ಈಗಾಗಲೆ ಪೋಷಕರ ಜೊತೆ ಸಬೆ ನಡೆಸಲಾಗಿದೆ. ಯಾವುದೇ ಪೋಷಕರು ಭಯ ಇಲ್ಲದೆ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಹಾಸನದಲ್ಲಿ ಡಿಸಿ ಆರ್ ಗಿರೀಶ್ ಮನವಿ ಮಾಡಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ