ಭಾರತದಲ್ಲಿ ಇಳಿಯುತ್ತಿರುವ ಕೊರೋನಾ: ದೇಶದಲ್ಲಿಂದು 2.09 ಲಕ್ಷ ಹೊಸ ಕೇಸ್ ಪತ್ತೆ, 959 ಮಂದಿ ಸಾವು
ಸೋಮವಾರ, 31 ಜನವರಿ 2022 (20:35 IST)
ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳು ಸೋಮವಾರ ಇಳಿಕೆಯಾಗಿದೆ. ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಳ್ಳುವ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 2,09,918 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 959 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,13,02,440ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,95,050ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 2,62,628 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,89,76,122ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 17,59,434 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 72,57,74,705 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,66,03,96,227 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.