ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಪ್ರಕಟಿಸಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,16,977 ಕ್ಕೆ ಏರಿಕೆಯಾದರೆ, 36,773 ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 1640 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,55,862 ಕ್ಕೆ ಜಿಗಿತ ಕಂಡಿದೆ. ಇದರ ಸಕ್ರಿಯ ಪ್ರಕರಣಗಳ ಸಂಖ್ಯೆ 24,266 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 357 ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 400 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8512 ಕ್ಕೆ ಇಳಿಕೆಯಾಗಿದೆ.