ಕೊರೊನಾ ವೈರಸ್ : ಈ ಜಿಲ್ಲೆಯ ಸ್ಥಿತಿಗತಿ ಹೇಗಿದೆ ಗೊತ್ತಾ?

ಭಾನುವಾರ, 29 ಮಾರ್ಚ್ 2020 (18:35 IST)
ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕೇಸ್ ಗಳ ಕುರಿತು ಅಧಿಕೃತ ಪ್ರಕಟಣೆ ನೀಡುತ್ತಿದ್ದಾರೆ.

ಗದಗ ಜಿಲ್ಲೆಯಲ್ಲಿ ಕೊರೊನಾ ಪಿಡುಗು ತಡೆ ಕುರಿತ  ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಡುಗಡೆ ಮಾಡಿದ್ದಾರೆ. 

ಇದುವರೆಗೆ ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 180, (ಹೊಸದಾಗಿ  3 ಸೇರಿ).   28 ದಿನಗಳ ನಿಗಾ ಅವಧಿ ಪೂರೈಸಿದವರು 12 ಜನರಿದ್ದಾರೆ.   ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರ ಸಂಖ್ಯೆ: 162 (ಹೊಸದಾಗಿ 3 ಸೇರಿ).

ವೈದ್ಯಕೀಯ ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿರುವವರ ಸಂಖ್ಯೆ : 6 ಆಗಿದೆ.
ಇನ್ನು ಪರೀಕ್ಷೆಗಾಗಿ ಸಂಗ್ರಹಿಸಿದ 42 ಮಾದರಿಗಳು ನಕಾರಾತ್ಮಕವಾಗಿವೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ