ಕೊರೊನಾ ಬೀತಿ: ಬೆಂಗಳೂರಿನಲ್ಲಿ ಎಲ್ ಕೆಜಿ, ಯುಕೆಜಿ ಶಾಲೆಗಳಿಗೆ ರಜೆ

ಸೋಮವಾರ, 9 ಮಾರ್ಚ್ 2020 (09:32 IST)
ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದಾಗಿ ಬೆಂಗಳೂರಿನಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ವಿಭಾಗದ ಶಾಲೆಗಳಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ.


ಬೆಂಗಳೂರಿನಲ್ಲೂ ಕೊರೋನಾ ವೈರಸ್ ಭೀತಿ ವ್ಯಾಪಕವಾಗಿರುವುದರಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. ಮುಂದಿನ ಆದೇಶ ಬರುವವರೆಗೆ ಈ ವಿಭಾಗದ ಶಾಲೆಗಳಿಗೆ ರಜೆ ಜಾರಿಯಲ್ಲಿರುತ್ತದೆ.

ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೂ ಅನ್ವಯವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ