ಕೊರೋನಾ ವೈರಸ್ ನಿಯಂತ್ರಣ: ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ

ಬುಧವಾರ, 18 ಮಾರ್ಚ್ 2020 (18:59 IST)
ಕೋವಿಡ್-19 ಕುರಿತಂತೆ ಜನರ ಆರೋಗ್ಯ ಹಿತದೃಷ್ಟಿಯಿಂದ ಕಾಯಿಲೆಯ ಸ್ಫೋಟ ಮತ್ತು ಹರಡುವುದನ್ನು ತಡೆಗಟ್ಟಲು ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಬೀದರ್ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಹೆಚ್.ಆರ್.ಮಹಾದೇವ್ ಅವರು ಆದೇಶ ಹೊರಡಿಸಿದ್ದಾರೆ. ಐದಕ್ಕಿಂತ ಹೆಚ್ಚಿಗೆ ಜನ ಗುಂಪು ಸೇರುವುದು, ಸಂಚರಿಸುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಅವಧಿಯಲ್ಲಿ ಜಿಲ್ಲೆಗೆ ಆಗಮಿಸುವ ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು, ಭಾರತೀಯರನ್ನು (ಯಾವುದೇ ದೇಶಕ್ಕೆ ಭೇಟಿ ನೀಡಿರಲಿ) ಹಾಗೂ ವಿದೇಶಿಯರು ಜಿಲ್ಲೆಗೆ ಆಗಮಿಸುವಾಗ ಅವರಿಗೆ ರೋಗ ಲಕ್ಷಣ ಇಲ್ಲದಿದ್ದರೂ ಸಹ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಿಸಬೇಕು.

ಬೀದರ ಜಿಲ್ಲೆಯಾದ್ಯಂತ ಮಲ್ಟಿಪ್ಲೆಕ್ಸ್, ಚಿತ್ರ ಮಂದಿರ, ಉದ್ಯಾನವನಗಳನ್ನು, ನಾಟಕ ಪ್ರದರ್ಶನ ಹಾಗೂ ಸರ್ಕಾರಿ ಸಮಾರಂಭಗಳಲ್ಲಿ ಜನ ದಟ್ಟಣೆ ಸೇರುವಂತಹ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಮಾರ್ಚ್ 31 ರವರಗೆ ಈ ಕ್ರಮ ಕೈಗೊಳ್ಳಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ