ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ.
ಕೆಜಿ ಹಳ್ಳಿಯ 32 ವರ್ಷದ ಸೋಂಕಿತ ಸಾವನಪ್ಪಿದ್ದಾನೆ. ತೀವ್ರ ಜ್ವರದಿಂದ ಬಳಲುತ್ತಿದ್ದ 1270ನೇ ಸೋಂಕಿತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಆ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 10ಕ್ಕೇರಿದ್ದು, ರಾಜ್ಯದಲ್ಲಿ ಕೊರೊನಾಗೆ 43 ಮಂದಿ ಬಲಿಯಾದಂತಾಗಿದೆ.