ಕರ್ನಾಟಕಕ್ಕೆ ರೂಪಾಂತರಿ ಕೊರೊನಾ ಆತಂಕ!

ಭಾನುವಾರ, 28 ನವೆಂಬರ್ 2021 (11:09 IST)
ಬೆಂಗಳೂರು : ಕರ್ನಾಟಕಕ್ಕೂ ರೂಪಾಂತರಿ ಕೊರೊನಾ ವೈರಸ್ ಆತಂಕ ಹೆಚ್ಚಾಗಿದ್ದು, ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಅಧಿಕಾರಿಗಳು, ತಜ್ಞರ ಸಭೆಯನ್ನು ಶನಿವಾರ ನಡೆಸಲಾಯಿತು.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಆರ್. ಅಶೋಕ್, ಸಭೆಯಲ್ಲಿ ಹೊಸ ತಳಿಯ ಕೊರೊನಾ ಕುರಿತು ಮಾತುಕತೆ ನಡೆಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ.
ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಈ ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಚೆಕ್ಪೋಸ್ಟ್ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಸೂಚನೆ ಕೊಟ್ಟಿದ್ದೇವೆ. ಕೇರಳದಿಂದ ಬಂದವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಇರಲಿದೆ. ಹಾಸ್ಟೆಲ್ನಲ್ಲಿದ್ದವರಿಗೆ ಎರಡನೇ ಬಾರಿಗೆ ಟೆಸ್ಟ್ ಮಾಡಿಸಬೇಕು ಎಂದು ಸಿಎಂ ಜೊತೆ ಸಭೆ ಬಳಿಕ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ