ನಿಗಮ, ಮಂಡಳಿ ನೇಮಕಾತಿಯಿಂದ ಅಸಮಾಧಾನ ಸಹಜ: ದೇಶಪಾಂಡೆ

ಬುಧವಾರ, 26 ಅಕ್ಟೋಬರ್ 2016 (12:36 IST)
ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ನೇಮಕಾತಿಯಲ್ಲಿ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಜಾಪ್ರಭುತ್ವದಲ್ಲಿ ಅಸಮಾಧಾನ ಸಹಜ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಯಲ್ಲಿ ಇರುವುದು ಕೇವಲ 85 ಸ್ಥಾನಗಳು. ಹೀಗಾಗಿ ಎಲ್ಲಾ ಅತೃಪ್ತರನ್ನು ತೃಪ್ತಿಪಡಿಸಲು ಸಾಧ್ಯವಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿದ್ದೇನೆ ಎಂದು ಹೇಳಿದರು.
 
ನಿಗಮ ಮಂಡಳಿಯಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಕೋರಿ ಸಚಿವ ಆರ್‌.ವಿ.ದೇಶಪಾಂಡೆ ಅವರು ನಿನ್ನೆ ನವದೆಹಲಿಯಲ್ಲಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೂಡಾ ಭೇಟಿಯಾಗಿ ಚರ್ಚೆ ನಡೆಸಿದ್ದರು.
 
ನಿಗಮ ಮಂಡಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಯಲ್ಲಿ ಹಾಲಿ ಶಾಸಕರ ಹೆಸರನ್ನು ಸೇರಿಸಿದ್ದು, 20 ಜನ ಶಾಸಕರಿಗೆ ಸ್ಥಾನ ನೀಡುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ