ನಿಗಮ ಮಂಡಳಿ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ: ಮಾನದಂಡ ರೂಪಿಸಲು ಹೈಕಮಾಂಡ್ ಆದೇಶ

ಶನಿವಾರ, 3 ಸೆಪ್ಟಂಬರ್ 2016 (18:11 IST)
ನಿಗಮ ಮಂಡಳಿಗಳ ನೇಮಕಕ್ಕೆ ಮಾನದಂಡ ರೂಪಿಸುವಂತೆ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಿಗಮ ಮಂಡಳಿ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ ಉಂಟಾಗಿದೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ನಿಗಮ ಮಂಡಳಿಗಳ ನೇಮಕ ಕುರಿತಂತೆ ಚರ್ಚೆ ನಡೆಸಿದರು. ಆದರೆ, ನೇಮಕಕ್ಕೆ ಸೂಕ್ತ ಮಾನದಂಡ ರೂಪಿಸುವಂತೆ ರಾಹುಲ್ ಸಲಹೆ ನೀಡಿದ ಹಿನ್ನೆಲೆಯಲ್ಲಿ ನಿಗಮ ಮಂಡಳಿಗಳ ನೇಮಕ ಮತ್ತೆ ವಿಳಂಬವಾಗಲಿದೆ.
 
ಕಳೆದ ಮೂರು ವರ್ಷಗಳಿಂದ ಖಾಲಿಯಿರುವ ನಿಗಮ ಮಂಡಳಿಗಳಿಗೆ ಪಕ್ಷ ನಿಷ್ಠೆಯನ್ನು ಹೊಂದಿರುವ ಕಾರ್ಯಕರ್ತರಿಗೆ ನೀಡಬೇಕು ಎನ್ನುವ ಒತ್ತಾಯ ನಿರಂತರವಾಗಿ ಕೇಳಿ ಬರುತ್ತಿದೆ. ಆದರೆ, ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಶಾಸಕರು ಒತ್ತಡ ಹೇರುತ್ತಿರುವುದು ಗೊಂದಲ ಮೂಡಿಸಿದೆ.
 
ನವದೆಹಲಿಗೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ನಿಗಮ ಮಂಡಳಿಗಳ ಪಟ್ಟಿಯನ್ನು ಸಿದ್ದಪಡಿಸಿದ್ದರು. ಆದರೆ, ಇದೀಗ  ಮಾನದಂಡ ರೂಪಿಸಬೇಕಾದ ಹಿನ್ನೆಲೆಯಲ್ಲಿ ಹೊಸ ಪಟ್ಟಿ ಸಿದ್ದಪಡಿಸಬೇಕಾಗಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ