ಸ್ಯಾನಿಟೈಸರ್ ಖರೀದಿಯಲ್ಲಿ ಭ್ರಷ್ಟಾಚಾರ: ಸಿದ್ದರಾಮಯ್ಯ ಬಾಂಬ್

ಶುಕ್ರವಾರ, 24 ಸೆಪ್ಟಂಬರ್ 2021 (08:51 IST)
ಬೆಂಗಳೂರು : ಕಳಪೆ ಗುಣಮಟ್ಟದ ಸ್ಯಾನಿಟೈಸರ್ ಖರೀದಿಸುವ ಮೂಲಕ ಸರಕಾರ ಕೋವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಾಂಬ್ ಸಿಡಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಮಾತನಾಡಿದ ಅವರು, ಆರೋಗ್ಯ ಇಲಾಖೆ 9.66 ಕೋಟಿ ಮೌಲ್ಯದ ಸ್ಯಾನಿಟೈಸರ್ ಖರೀದಿಸಿದೆ. ಇದು ಕೆಲವೇ ದಿನಗಳಲ್ಲಿ ಕೊಳಚೆ ನೀರಿನಂತೆ ಕಾಣುತ್ತದೆ ಎಂದು ಸ್ಯಾನಿಟೈಸರ್ ಬಾಟೆಲ್ ಪ್ರದರ್ಶಿಸುವ ಮೂಲಕ ಗಂಭೀರ ಆರೋಪ ಮಾಡಿದರು.
ಡ್ರಗ್ಸ್ ಕಂಟ್ರೋಲ್ ಸ್ಯಾನಿಟೈಸರ್ ಅನ್ನು ತಿರಸ್ಕರಿಸಿದೆ. ಈಗಾಗಲೇ ಕಳಪೆ ಸ್ಯಾನಿಟೈಸರ್ಗೆ 2 ಕೋಟಿ ಹಣ ನೀಡಲಾಗಿದೆ. ಒಂದು ಕಡೆ ಪರಿಹಾರಕ್ಕೆ ದುಡ್ಡಿಲ್ಲ ಅಂತಾರೆ. ಇನ್ನೊಂದು ಕಡೆ ಇಂತಹ ಸ್ಯಾನಿಟೈಸರ್ ಖರೀದಿ ಮಾಡುತ್ತಾರೆ. ಈ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಆಗಬೇಕು. ಸಚಿವ ಅಥವಾ ಅಧಿಕಾರಿ ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ