ಕಾಂಗ್ರೆಸ್ ಟಿಕೇಟ್ ಘೋಷಣೆಗೆ ಕೌಂಡೌನ್...!
ದೆಹಲಿಯಲ್ಲಿ ಎಐಸಿಸಿ ಚುನಾವಣಾ ಸಮಿತಿ ಸಭೆಯಿದ್ದು ರಾಜ್ಯ ನಾಯಕರು ದೆಹಲಿಗೆ ಪ್ರಯಾಣ ಬೆಳಿಸಿದ್ದು. ನಾಳೆ ಮೊದಲ ಪಟ್ಟಿ ಟಿಕೆಟ್ ಘೋಷಣೆಗೆ ಅನುಮತಿ ಪಡೆಯಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಸ್ಕ್ರೀನಿಂಗ್ ಕಮೀಟಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ.ಆದರೆ ಕೆಲವು ಕ್ಷೇತ್ರಗಳಲ್ಲಿ ಯಾರಿಗೆ ಟಿಕೇಟ್ ಕೊಡಬೇಕು ಎಂಬ ಗೊಂದಲ ನಿರ್ಮಾನ ವಾಗಿದ್ದು, ಅಂತಹ ಕ್ಷೇತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಿದ್ದು, ಬಹುತೇಖ ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಆದರೆ ನಾಲ್ಕೈದು ಹಾಲಿ ಶಾಸಕರಿಗೆ ಟಿಕೆಟ್ ಮಿಸ್ ಆಗಲಿದ್ದು. ಆ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಮಾಡಿ ಕೊಡಲಿದ್ದಾರೆ ಎಂದು ಹೇಳಲಾಗಿದೆ.ಇನ್ನೂ ಮಾರ್ಚ್ ೨೦ ರಂದು ರಾಜ್ಯಕ್ಕೆ ರಾಹುಲ್ ಭೇಟಿ ನೀಡಲಿದ್ದು. ರಾಹುಲ್ ಗಾಂಧಿ ರಾಜ್ಯ ಭೇಟಿ ನಂತರ ಅಧಿಕೃತ ಟಿಕೆಟ್ ಘೋಷಣೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.