ಶ್ರವಣಬೆಳಗೋಳದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ

ಬುಧವಾರ, 7 ಫೆಬ್ರವರಿ 2018 (08:47 IST)
ಹಾಸನ : ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ  ಶ್ರವಣಬೆಳಗೋಳದಲ್ಲಿ 88ನೇ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ.


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬೆಳಿಗ್ಗೆ 10.45 ಕ್ಕೆ ಮಹಾಮಸ್ತಕಾಭಿಷೇಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡರು ಭಾಗಿಯಾಗಲಿದ್ದಾರೆ. ಶ್ರವಣಬೆಳಗೋಳದ ಮಹಾಮಸ್ತಕಾಭಿಷೇಕಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ.


ಫೆಬ್ರವರಿ 7 ರಿಂದ 26ರ ವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ಆಗಮನದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಹಾಗೆ ಶ್ರವಣಬೆಳಗೋಳದ 5 ಕೀ.ಮೀ. ವ್ಯಾಪ್ತಿಯಲ್ಲಿ ಮದ್ಯಮಾರಾಟವನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮದ್ಯ ಮಾರಾಟ ಮಾಡಿದರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ