ಮತ ಏಣಿಕೆಗೆ ಕ್ಷಣಗಣನೆ; ನಿಷೇಧಾಜ್ಞೆ ಜಾರಿ

ಬುಧವಾರ, 22 ಮೇ 2019 (15:16 IST)
ಭಾರಿ ಕುತೂಹಲ ಕೆರಳಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಇನ್ನೇನು, ಪ್ರಕ್ರಿಯೆ ಆರಂಭಕ್ಕೆ ಕಕೆಲವು ಗಂಟೆಗಳು ಮಾತ್ರ ಬಾಕಿ ಉಳಿದಿದೆ.  ರಾಜ್ಯ ಮಾತ್ರವಲ್ಲದೇ ದೇಶಾದ್ಯಂತ  ಬಹಳ ಕಾತುರತೆಯಿಂದ ಕಾಯುತ್ತಿರುವ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. 

ಮತ ಏಣಿಕೆ ಪ್ರಕ್ರಿಯೆಗೆ ಈಗಾಗಲೇ, ಎಲ್ಲಾ ಅಗತ್ಯ ತಯಾರಿ ನಡೆಸಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್  ವ್ಯವಸ್ಥೆಯಲ್ಲಿ ಏಣಿಕೆ ಕಾರ್ಯ ನಡೆಯಲಿದ್ದು, ಶಿವಮೊಗ್ಗದಲ್ಲಿ 144 ನೇ ಸೆಕ್ಷನ್ ವಿಧಿಸಲಾಗಿದೆ.

ಮೇ 23 ರಂದು ಲೋಕಸಭಾ ಚುನಾವಣೆಯ ಮತ ಏಣಿಕೆ ಪ್ರಕ್ರಿಯೆ ನಡೆಯುತಲಿದ್ದು, ಇದಕ್ಕಾಗಿ ಎಲ್ಲಾ ಅಗತ್ಯ ತಯಾರಿ ನಡೆಸಲಾಗಿದೆ.  ಶಿವಮೊಗ್ಗದ 8 ವಿಧಾನಸಭಾ ಕ್ಷೇತ್ರಗಳ ಪೈಕಿ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ ಗಳಂತೆ, 112 ಟೇಬಲ್ ಗಳನ್ನು ಜೋಡಿಸಲಾಗಿದ್ದು, ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಹಾಗೂ ಮೈಕ್ರೋ ಅಬ್ಸರ್ವರ್ ಗಳನ್ನು ನೇಮಿಸಲಾಗಿದ್ದು, 15 ಎಣಿಕೆ ಕೊಠಡಿಗಳಲ್ಲಿ ಮತ ಏಣಿಕೆ ನಡೆಯಲಿದೆ.

ಇನ್ನು ಮತ ಎಣಿಕೆ ಕಾರ್ಯ ನಡೆಯಲಿರುವ ಮೇ 23 ರಂದು ಬೆಳಿಗ್ಗೆ 6 ರಿಂದ ಮೇ 24 ರ ಬೆಳಿಗ್ಗೆ 6 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಕಲಂ 144 ಅನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸುವವರು ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿ, ಎಚ್ಚರಿಕೆ ನೀಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ