ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

Sampriya

ಶುಕ್ರವಾರ, 10 ಮೇ 2024 (20:09 IST)
Photo Courtesy X
ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣ ಸಂಬಂಧ  ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಲು ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.

2023ರಲ್ಲಿ ಬ್ರಿಜ್ ಭೂಷಣ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಆರೋಪ ಮಾಡಿ, ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಪೊಲೀಸರು ಜೂನ್ 15 ರಂದು ಬ್ರಿಜ್ ಭೂಷಣ್ ಶರಣ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354, 354 (ಎ), 354 (ಡಿ) ಅಡಿಯಲ್ಲಿ ಚಾರ್ಚ್​ಶೀಟ್​ ಸಲ್ಲಿಸಲಾಗಿದೆ.

ಆರನೇ ಕುಸ್ತಿಪಟು ಮಾಡಿದ ಆರೋಪಗಳಿಂದ ಬ್ರಿಜ್ ಭೂಷಣ್ ಅವರನ್ನು ಖುಲಾಸೆಗೊಳಿಸಿದೆ ಎಂದು ನ್ಯಾಯಾಲಯ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ