ಅವುಗಳನ್ನು ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ದಾವಣಗೆರೆಯ ಡಿ.ಆರ್. ಶಾರದಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಸರ್ಕಾರದ ಪರ ವಕೀಲರು ರಾಜ್ಯದಲ್ಲಿ ಎಲ್ಲಾ ರೀತಿಯ ಆನ್ಲೈನ್ ಗ್ಯಾಂಬ್ಲಿಂಗ್ ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಕಾಯಿದೆ ಜಾರಿಗೆ ತರಲಾಗಿದೆ. ಅರ್ಜಿದಾರರ ಮನವಿ ಈಡೇರಿರುವುದರಿಂದ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ ಎಂದು ಪೀಠಕ್ಕೆ ತಿಳಿಸಿದರು.