ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಸಮನ್ಸ್

geetha

ಶುಕ್ರವಾರ, 12 ಜನವರಿ 2024 (17:00 IST)
ಮಂಡ್ಯ:ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್ ರ್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ಬಿಜೆಪಿಯ 17 ಮಂದಿ ಕಾರ್ಯಕರ್ತರಿಗೆ ಪಾಂಡವಪುರ JMFC ಕೋರ್ಟ್​ ಸಮನ್ಸ್ ಜಾರಿಗೊಳಿಸಿದೆ. ಈ ಕಾರ್ಯಕರ್ತರು ಎಸ್​ಡಿಪಿಐ, ಪಿಎಫ್​ಐ ಸಂಘಟನೆಗಳ ವಿರುದ್ಧದ ಪ್ರತಿಭಟನೆಗೆ ಮಂಗಳೂರಿಗೆ ಹೊರಟಿದ್ದರು. ಪಾಂಡವಪುರದಿಂದ ಮಂಗಳೂರಿಗೆ ಬೈಕ್​ ಱಲಿ ಮೂಲಕ ಹೊರಟಿದ್ದರು. ಇದೇ ವೇಳೆ ಪಾಂಡವಪುರದಲ್ಲಿ ಪ್ರತಿಭಟನಾಕಾರರನ್ನು ತಡೆದಿದ್ದ ಪೊಲೀಸರು, ಎಫ್​ಐಆರ್ ದಾಖಲಿಸಿ ನಂತರ ಚಾರ್ಜ್​ಶೀಟ್ ಸಲ್ಲಿಸಿದ್ದರು.

ಕಾರ್ಯಕರ್ತರಿಗೆ ಸಮನ್ಸ್ ಜಾರಿ ವಿಚಾರವಾಗಿ ಪೊಲೀಸರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇಷ್ಟು ವರ್ಷ ಇಲ್ಲದ ಸಮನ್ಸ್ ಈಗ ಯಾಕೆ ಎಂದು ಬಿಜೆಪಿ ಪ್ರಶ್ನಿಸಿದೆ. ಜತೆಗೆ, ರಾಜ್ಯ ‌ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಮಧ್ಯೆ, ನಾವು ಯಾವುದೇ ನೋಟಿಸ್ ನೀಡಿಲ್ಲ. ಅದು ಕೋರ್ಟ್​​ನಿಂದ ಜಾರಿಯಾಗಿರುವ ಸಮನ್ಸ್ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಳೆದ ತಿಂಗಳೇ ಸಮನ್ಸ್ ಜಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ