ಕೊರೊನಾ ವೈರಸ್ ಅಬ್ಬರ ಹಾಗೂ ಲಾಕ್ ಡೌನ್ ನಿಂದಾಗಿ ನಮ್ಮ ಮೆಟ್ರೋ ಸಂಸ್ಥೆಗೆ 409 ಕೋಟಿ ರೂ. ನಷ್ಟ ಉಂಟಾಗಿದೆ.
ನಮ್ಮ ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್ ಸೋಮವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಕೊರೊನಾದಿಂದ 5 ತಿಂಗಳಿನಿಂದ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದ್ದರಿಂದ 409 ಕೋಟಿ ನಷ್ಟ ಉಂಟಾಗಿದೆ ಎಂದರು.