ಇಎಸ್‍ಐಸಿನಲ್ಲಿ ಶುರು ಆಗದ ಕೋವಿಡ್ ಲ್ಯಾಬ್ : ಸಂಸದ ಹೇಳಿದ್ದೇನು?

ಸೋಮವಾರ, 13 ಜುಲೈ 2020 (20:44 IST)
ಇಎಸ್‍ಐಸಿ ಆಸ್ಪತ್ರೆಯಲ್ಲಿ ಜೂನ್ ಅಂತ್ಯದೊಳಗೆ ಕೋವಿಡ್ ಲ್ಯಾಬ್ ಕಾರ್ಯಾರಂಭ ಮಾಡಬೇಕಿತ್ತು. ಆದರೆ ತಪಾಸಣೆಗೆ ಬೇಕಾದ ಯಂತ್ರಗಳೇ ಬರುತ್ತಿಲ್ಲ.

ಶೀಘ್ರದಲ್ಲೇ ಕಲಬುರಗಿ ನಗರದ ಇಎಸ್‍ಐಸಿ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕು ಪತ್ತೆ ಮಾಡುವ ಪ್ರಯೋಗಾಲಯ ಆರಂಭಿಸಲಾಗುತ್ತಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ್ ಅವರ ಜೊತೆ ಇಎಸ್‍ಐಸಿ ಅಸ್ಪತ್ರೆಗೆ ಭೇಟಿ ನೀಡಿ ಪ್ರಯೋಗಾಲಯ ಸ್ಥಾಪನೆ ಕುರಿತು ದೆಹಲಿಯ ಕಾರ್ಮಿಕ ಮಂತ್ರಾಲಯ ಸೇರಿದಂತೆ ಇನ್ನಿತರರೊಂದಿಗೆ ನಡೆಸಲಾದ ಪತ್ರ ವ್ಯವಹಾರಗಳನ್ನು ಪರಿಶೀಲಿಸಿ  ಮಾತನಾಡಿದರು.

ಜೂನ್ 30ರೊಳಗೆ ಲ್ಯಾಬ್ ಆರಂಭವಾಗಬೇಕಿತ್ತು. ಆದರೆ, ಇನ್ನೂ ಯಾಕೆ ಶುರುವಾಗಿಲ್ಲ ಎಂದು ಇಎಸ್‍ಐಸಿ ನಿರ್ದೇಶಕ ನಾಗರಾಜ್ ಹಾಗೂ ವೈದ್ಯರನ್ನು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, ಆರ್‍ಟಿಪಿಸಿರ್ ಯಂತ್ರ ಸೇರಿದಂತೆ ಪ್ರಯೋಗಾಲಯಕ್ಕೆ ಅಗತ್ಯವಿರುವ ಸಾಮಾಗ್ರಿಗಳನ್ನು ಪೂರೈಸಲು ಗುತ್ತಿಗೆ ಸಂಸ್ಥೆಗಳು ಅಸಕ್ತಿ ತೋರುತ್ತಿಲ್ಲ ಎಂದರು.

ಹೀಗಾಗಿ ಸಂಸದರು ಈ ಸಂಬಂಧ ಕಾರ್ಮಿಕ ಮಂತ್ರಾಲಯದ ಜಂಟಿ ನಿರ್ದೇಶಕ ಅನುರಾಧ ಪ್ರಸಾದ್ ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ