ಬಿಜೆಪಿಗೆ ಡಿಚ್ಚಿ ಕೊಟ್ಟು ಕಾಂಗ್ರೆಸ್ ಸೇರಿಕೊಂಡ ಸಿಪಿ ಯೋಗೇಶ್ವರ್: ಇನ್ನೀಗ ಚನ್ನಪಟ್ಟಣ ಸ್ಪರ್ಧೆ ಪಕ್ಕಾ

Krishnaveni K

ಬುಧವಾರ, 23 ಅಕ್ಟೋಬರ್ 2024 (10:28 IST)
ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಸಿಪಿ ಯೋಗೇಶ್ವರ್ ಇಂದು ಬೆಳಿಗ್ಗೆಯೇ ಸಿಎಂ ಅಧಿಕೃತ ನಿವಾಸದಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದು, ಕಾಂಗ್ರೆಸ್ ಸೇರ್ಪಡೆಯಾಗುವುದು ಪಕ್ಕಾ ಆಗಿದೆ.

ಸಿಪಿ ಯೋಗೇಶ್ವರ್ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿತರಾಗಿದ್ದರು. ಆದರೆ ಅವರಿಗೆ ಟಿಕೆಟ್ ಬಿಟ್ಟುಕೊಡಲು ದೋಸ್ತಿ ಪಕ್ಷ ಜೆಡಿಎಸ್ ನಾಯಕ ಕುಮಾರಸ್ವಾಮಿ ಸಿದ್ಧರಿರಲಿಲ್ಲ. ಹೀಗಾಗಿ ಅವರು ಬಂಡಾಯವೆದ್ದಿದ್ದರು. ಈ ನಡುವೆ ಕಾಂಗ್ರೆಸ್ ಗೆ ಸೇರ್ಪಡೆಯಾಗದೇ ಇದ್ದರೆ ಸ್ವತಂತ್ರವಾಗಿಯಾದರೂ ಸ್ಪರ್ಧೆ ನಡೆಸಲು ಮುಂದಾಗಿದ್ದರು.

ಇದೀಗ ಇಂದು ಬೆಳಿಗ್ಗೆಯೇ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಮೀರ್ ಅಹ್ಮದ್ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿಯಾದ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರುವ ನಿರ್ಧಾರ ಪ್ರಕಟಿಸಿದ್ದಾರೆ. ಇದೀಗ ಚನ್ನಪಟ್ಟಣದಿಂದ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಪಕ್ಕಾ ಆಗಿದೆ.

ಇಂದು ಬೆಳಿಗ್ಗೆ 11.30 ಕ್ಕೆ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಉಪಮುಖ್ಯಮಂತ್ರಿಗಳು ಹಾಗೂ  ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಅವರು ಹಾಗೂ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ  ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ