ಜೈಪುರ : ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಶುಕ್ರವಾರ 19 ಹೊಸ ಜಿಲ್ಲೆಗಳನ್ನು ರಚಿಸಿರುವುದಾಗಿ ಘೋಷಣೆ ಮಾಡಿದ್ದಾರೆ.
ಶುಕ್ರವಾರ ರಾಜಸ್ಥಾನದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಹೊಸ ಜಿಲ್ಲೆಗಳು ಮತ್ತು ವಿಭಾಗಗಳ ರಚನೆಯನ್ನು ಘೋಷಿಸಿದ್ದಾರೆ.
ಈ ಹೊಸ 19 ಜಿಲ್ಲೆಗಳೊಂದಿಗೆ ರಾಜಸ್ಥಾನದ ಒಟ್ಟು ಜಿಲ್ಲೆಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಬನ್ಸ್ವಾರಾ, ಪಾಕಿ ಹಾಗೂ ಸಿಕಾರ ಮೂರು ಹೊಸ ವಿಭಾಗಗಳನ್ನು ಗುರುತಿಸಲಾಗಿದ್ದು, ರಾಜ್ಯದ ಒಟ್ಟು ವಿಭಾಗಗಳ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.