ಕ್ರಿಕೆಟ್ ಪಂದ್ಯಾವಳಿ ಹಿನ್ನೆಲೆ ಪೊಲೀಸ್ ಭದ್ರತೆ

ಭಾನುವಾರ, 12 ನವೆಂಬರ್ 2023 (16:00 IST)
ಇಂದು ಭಾರತ, ನೆದರ್ಲೆಂಡ್ ಪಂದ್ಯ ಹಿನ್ನೆಲೆ ಭದ್ರತೆಯ ದೃಷ್ಟಿಯಿಂದ ಒಂದು ಸಾವಿರಕ್ಕೂ ಹೆಚ್ಚು ಪೊಲೀಸ್ ನಿಯೋಜನೆ ಮಾಡಲಾಗಿದೆ.ಕ್ರಿಕೆಟ್ ವೀಕ್ಷಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಅಭಿಮಾನಿಗಳು ಆಗಮಿಸುತ್ತಿದ್ದಾರೆ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ-ನೆದರ್ಲೆಂಡ್​ ನಡುವೆ ಕೊನೆಯ ಲೀಗ್ ಪಂದ್ಯ ನಡೆಯಲಿದ್ದು,ಈಗಾಗಲೇ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.ಅದೇ ರೀತಿಯಾಗಿ ಸ್ಟೇಡಿಯಂ ಸುತ್ತಮುತ್ತ ಇಂದು ಬೆಳಗ್ಗೆ 7ರಿಂದ ರಾತ್ರಿ 11 ಗಂಟೆವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
 
ಭಾರತ-ನೆದರ್ಲೆಂಡ್​ ನಡುವೆ ಇಂದು ಕೊನೆಯ ಲೀಗ್ ಪಂದ್ಯ ನಡೆಯಲಿದೆ.ಬೆಂಗಳೂರಲ್ಲಿ 4 ಪಂದ್ಯ ನಡೆದಿದ್ದು, ಇಂದು 5ನೇ ಪಂದ್ಯ ನಡೆಯಲಿದೆ.ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.ಅದೇ ರೀತಿಯಾಗಿ ಸ್ಟೇಡಿಯಂ ಸುತ್ತಮುತ್ತ ಇಂದು ಬೆಳಗ್ಗೆ 7ರಿಂದ ರಾತ್ರಿ 11 ಗಂಟೆವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.ನಗರದ ಕ್ವೀನ್ಸ್ ರಸ್ತೆ, ಎಂ.ಜಿ.ರಸ್ತೆ, ರಾಜಭನವ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್​ಬಾ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆಗೆ ಸಂಪೂರ್ಣವಾಗಿ ನಿಷೇಧಿಸಿದೆ.ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್, ಶಿವಾಜಿನಗರ ಬಸ್ ನಿಲ್ದಾಣ ಸೇರಿದಂತೆ ನಿಗದಿತ ಸ್ಥಳದಲ್ಲಿ ಮಾತ್ರ ವಾಹನಗಳ ನಿಲುಗಡೆಗೆ ಪೊಲೀಸರು ಮನವಿ ಮಾಡಿದ್ದಾರೆ.ಅದೇ ರೀತಿಯಾಗಿ ಸರಕು ಸಾಗಣೆ ವಾಹನಗಳಿಗೆ ನಿಷೇಧಿಸಲಾಗಿದ್ದು, ಕ್ಯಾಬ್​ಗಳಿಗೆ ಪಿಕ್ ಅಪ್ ಮತ್ತು ಡ್ರಾಪ್ ವಾಹನಗಳಿಗೆ ಸ್ಥಳ ನಿಯೋಜನೆ ಮಾಡಲಾಗಿದೆ.
 
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ಶುರುವಾಗಲಿದೆ.ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸುತ್ತಿದ್ದಾರೆ.ಹಾಗಾಗಿ ನಾಲ್ವರು ಡಿಸಿಪಿಗಳ ನೇತೃತ್ವದಲ್ಲಿ ಎಂ.ಚಿನ್ನಸ್ವಾಮಿ ಮೈದಾನಕ್ಕೆ ಭದ್ರತೆ ಕಲ್ಪಿಸಲಾಗಿದೆ.ವಾಹನ ಸವಾರರಿಗೆ ತೊಂದರೆಯಾಗದಂತೆ ಕ್ವೀನ್ಸ್ ರಸ್ತೆ, ಕಬ್ಬನ್ ರಸ್ತೆಯುದ್ದಕ್ಕೂ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ