ಕೇಬಲ್ ಮಾಫಿಯಾ, ಜಲಮಂಡಳಿ ಕಾಮಗಾರಿಗಳಿಂದ ಬೆಂಗಳೂರಿನ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಇದರಿಂದ ರಸ್ತೆ ಅವಘಡಗಳಲ್ಲಿ ಮುಗ್ಧರು ಜೀವ ಕಳೆದುಕೊಂಡ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಇದರಿಂದ ಎಚ್ಚೆತ್ತ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ ಗುಪ್ತಾ ರಸ್ತೆ ಕತ್ತರಿಸುವರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ರಸ್ತೆ ಕಡಿಯುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುದ್ದಿಗಾರರ ಜತೆ ಮಾತನಾಡಿದ ಪಾಲಿಕೆ ಮುಖ್ಯ ಆಯುಕ್ತರು, ಕೆಲವು ರಸ್ತೆಗಳಲ್ಲಿ ವಿದ್ಯುತ್ ಕೇಬಲ್‌ಗಳು ಇವೆ. ಜಲಮಂಡಳಿ ಅಳವಡಿಸಿರುವ ಕುಡಿಯುವ ನೀರಿನ ಪೈಪುಗಳು ಇವೆ. ಅವುಗಳಿಗೆ ಹಾನಿ ಉಂಟಾದಾಗ ರಸ್ತೆ ಕತ್ತರಿಸಬೇಕಾಗುತ್ತದೆ. ಆದರೆ ರಸ್ತೆ ಕತ್ತರಿಸಬೇಕಾದರೆ, ಬಿಬಿಎಂಪಿ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಇದಕ್ಕಾಗಿಯೇ ಪ್ರತ್ಯೇಕ ವ್ಯವಸ್ಥೆ ರೂಪಿಸಲಾಗಿದೆ ಎಂದರು.