ರಾಜ್ಯದ ನೆಲ, ಜಲದ ಬಗ್ಗೆ ಕಾಳಜಿಯಿದ್ದರೆ ರೈತರಿಗೆ ನೆರವಾಗಿ ಎಂದು ಟೀಕೆ

geetha

ಬುಧವಾರ, 10 ಜನವರಿ 2024 (17:23 IST)
ಬೆಂಗಳೂರು : ಕಾಂಗ್ರೆಸ್‌ ಪಕ್ಷದ ನಾಯಕರಿಗೆ ನಾಡಿನ ನೆಲ, ಜಲದ ಬಗ್ಗೆ ನಿಜವಾಗಿಯೂ ಕಾಳಜಿಯಿದ್ದರೆ ರೈತರಿಗೆ, ಕಾವೇರಿ ಹೋರಾಟಗಾರರಿಗೆ ಹಾಗೂ ಕನ್ನಡ ಪರ ಹೋರಾಟಗಾರರಿಗೆ ನೆರವಾಗಿ ಎಂದು ಟೀಕಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶ ನೀಡದಿರುವುದನ್ನು ಖಂಡಿಸಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. 
 
 ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ವಿಚಾರದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ತಿಳಿಸಬೇಕೆಂದು ಒತ್ತಾಯಿಸಿರುವ ವಿಜಯೇಂದ್ರ, ಕಾವೇರಿ ವಿಚಾರದಲ್ಲಿ ಕಳೆದ ಆರು ತಿಂಗಳಿಂದ ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ಆ ಕುರಿತು ದಿಟ್ಟ ನಿರ್ಧಾರಕ್ಕೆ ಬರಬೇಕು ಎಂದರು. 
ಜೊತೆಗೆ, ಟ್ಯಾಬ್ಲೋ ವಿಚಾರದಲ್ಲಿ ಕರ್ನಾಟಕಕ್ಕೆ 14 ವರ್ಷಗಳಿಂದ ಅವಕಾಶ ಸಿಕ್ಕಿದೆ. ಈ ಬಾರಿ ಅವಕಾಶ ಕೊಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಲ್ಲ. ಆದರೆ ಈ ಬಗ್ಗೆ ದೊಡ್ಡ ವಿವಾದವೆಬ್ಬಸುತ್ತಿರುವ ರಾಜ್ಯ ಸರ್ಕಾರ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಟೀಕಿಸಿದರು. 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ