ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ಕೋಟಿ ರೂಪಾಯಿ ನೆರವು

ಶನಿವಾರ, 31 ಡಿಸೆಂಬರ್ 2022 (20:35 IST)
ದೇಶದಲ್ಲೇ ಮೊದಲ ಬಾರಿಗೆ ತನ್ನ ಸಿಬ್ಬಂದಿಗೆ ಒಂದು ಕೋಟಿ ರೂಪಾಯಿ ಮೊತ್ತದ ಅಪಘಾತ ವಿಮೆ ಯೋಜನೆ ಜಾರಿಗೆ ತಂದಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಟ್ಟ ಮಾತಿನಂತೆ ನಡೆದುಕೊಂಡಿದೆ.
 
ಕಳೆದ ನವೆಂಬರ್​ನಲ್ಲಿ ಕೆಎಸ್​ಆರ್​ಟಿಸಿ ನಿಗಮ ತನ್ನ ನೌಕರರಿಗೆ ಒಂದು ಕೋಟಿ ರೂಪಾಯಿ ಮೊತ್ತದ ಅಪಘಾತ ವಿಮೆ ಯೋಜನೆ ಜಾರಿ ಮಾಡಿತ್ತು. ಈ ಹಿಂದೆ ಅಪಘಾತ ವಿಮಾ ಯೋಜನೆಗೆ ಸಂಬಂಧಿಸಿದಂತೆ ಎಸ್​ಬಿಐ​​ನೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯಂತೆ 50 ಲಕ್ಷ ರೂಪಾಯಿ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್​​ ಸಂಸ್ಥೆಯೊಂದಿಗೆ ಮಾಡಿಕೊಂಡ ಒಡಂಬಡಿಕೆಯ 50 ಲಕ್ಷ ರೂಪಾಯಿ ಸೇರಿ ಒಟ್ಟು ಒಂದು ಕೋಟಿ ರೂಪಾಯಿ ಅಪಘಾತ ವಿಮೆಯನ್ನು ಸಿಬ್ಬಂದಿಗೆ ನೀಡುವುದಾಗಿ ಘೋಷಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ