ಕ್ರೂಸರ್‌ ವಾಹನಕ್ಕೆ ಲಾರಿ ಡಿಕ್ಕಿ: 8 ಮಂದಿ ದುರ್ಮರಣ

ಮಂಗಳವಾರ, 19 ಜುಲೈ 2016 (16:38 IST)
ಕ್ರೂಸರ್‌ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಡೋಗೀನಾಲಾ ಬಳಿ ನಡೆದಿದೆ.
 
ಘಟನೆಯಲ್ಲಿ ಇಬ್ಬರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು 8 ಜನ ಸಾವನ್ನಪ್ಪಿದ್ದಾರೆ. ಮೃತರೆಲ್ಲರು ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಕಣಗರಾ ಗ್ರಾಮದವರಾಗಿದ್ದು, ಮೃತರು ಗುರುಪೂರ್ಣಿಮೆಯ ನಿಮಿತ್ತ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
 
ಘಟನೆಯಲ್ಲಿ ಒಂದೇ ಕುಟುಂಬದ 8 ಜನ ಮೃತಪಟ್ಟಿದ್ದು, 9 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾದ್ದು, ಘಟನೆ ಕುರಿತಂತೆ ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ