ಸಿಟಿ ರವಿ, ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣದಲ್ಲಿ ದೂರು ಪರಿಶೀಲಿಸಿ ಕ್ರಮ: ಸಭಾಪತಿ

Sampriya

ಭಾನುವಾರ, 29 ಡಿಸೆಂಬರ್ 2024 (16:42 IST)
ದಾವಣಗೆರೆ: ಸದನಲ್ಲಿ ನಡೆದ ಎಂಎಲ್‌ಸಿ ಸಿಟಿ ರವಿ ಹಾಗೂ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಸಂಬಂಧ ದೂರು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ ದೂರು ಪರಿಶೀಲಿಸಿ ಸದನದ ಪರಿಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದ‌ತು.

ಡಿ.19ರಂದು ಸದನದಲ್ಲಿ ನಡೆದ ಬೆಳವಣಿಗೆಯನ್ನು ಗಮನಿಸಿದ್ದೇನೆ. ದಾಖಲೆಗಳು ಪರಿಶೀಲಿಸಿದ್ದೇನೆ. ಇದನ್ನು ಬೆಳೆಸುವುದರಲ್ಲಿ ಅರ್ಥವಿಲ್ಲ. ಇದು ಇಲ್ಲಿಗೆ ಮುಗಿಯಲಿ ಎಂಬುದು ನನ್ನ ಅಪೇಕ್ಷೆ ಎಂದು ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದರು.

ವಿಧಾನಪರಿಷತ್‌ನಲ್ಲಿ ಇರುವ ಸಿ.ಸಿ.ಟಿವಿ ಕ್ಯಾಮೆರಾ ಹಾಗೂ ಆಡಿಯೊ ಅಧಿಕೃತ ದಾಖಲೆಗಳು. ಖಾಸಗಿ ಸುದ್ದಿವಾಹಿನಿಯಲ್ಲಿ ಭಿತ್ತರವಾದ ದೃಶ್ಯಗಳ ಬಗ್ಗೆ ಮಾಹಿತಿ ಇಲ್ಲ. ಈ ದೃಶ್ಯಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು ಎಂದು ವಿವರಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ