ಯು ಟಿ ಖಾದರ್ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ನೀಡಲು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಸಿಟಿ ರವಿ

ಶನಿವಾರ, 21 ಡಿಸೆಂಬರ್ 2019 (10:26 IST)
ಬೆಂಗಳೂರು: ಕರ್ನಾಟಕದಲ್ಲಿ ಪೌರತ್ವ ಖಾಯಿದೆ ಜಾರಿಗೆ ತಂದಿದ್ದೇ ಆದಲ್ಲಿ ಇಡೀ ರಾಜ್ಯ ಹೊತ್ತಿ ಉರಿಯಲಿದೆ ಎಂದು ಮಾಜಿ ಸಚಿವ ಯು ಟಿ ಖಾದರ್ ನೀಡಿದ್ದ ವಿವಾದಿತ ಹೇಳಿಕೆಗೆ ತಿರುಗೇಟು ನೀಡುವಾಗ ಸಚಿವ ಸಿಟಿ ರವಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಬಹುಸಂಖ್ಯಾತರು ಈಗ ತಾಳ್ಮೆಯಿಂದಿದ್ದಾರೆ. ತಾಳ್ಮೆ ಕಳೆದುಕೊಂಡರೆ ಏನಾಗುತ್ತದೆ ಎಂದು ನೋಡಲು ಗೋದ್ರಾದಲ್ಲಿ ನಡೆದಿದ್ದಂತಹ ಘಟನೆಗಳನ್ನು ನೆನಪಿಸಿಕೊಳ್ಳಲಿ ಎಂದು ರವಿ ಹೇಳಿರುವುದು ಮತ್ತೊಂದು ವಿವಾದ ಸೃಷ್ಟಿಸಿದೆ.

ರಾಜಕೀಯ ನಾಯಕರ ಇಂತಹ ಹೇಳಿಕೆಗಳು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಪರಿಸ್ಥಿತಿಯನ್ನು ತಣ್ಣಗಾಗಿಸುವ ಬದಲು ರಾಜಕಾರಣಿಗಳೇ ಇಂತಹ ಹೇಳಿಕೆಗಳ ಮೂಲಕ ಮತ್ತಷ್ಟು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದಂತಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ