ನಷ್ಟಕ್ಕೆ ಕಂಡಕ್ಟರ್- ಡ್ರೈವರ್ ಕಾರಣರೇ?
4 ನಿಗಮಗಳು ನಷ್ಟದಲ್ಲಿವೆ ಎಂದಿದ್ದೀರಿ. ನಷ್ಟಕ್ಕೆ ಕಂಡಕ್ಟರ್- ಡ್ರೈವರ್ ಕಾರಣರೇ? ಖರೀದಿಯಲ್ಲಿ ಲೂಟಿ ಹೊಡೆಯುವವರು ಕಂಡಕ್ಟರ್ ಡ್ರೈವರ್‍ಗಳೇ? ಯಾರು ಕಾರಣ ಎಂದು ಸಿ.ಟಿ.ರವಿ ಅವರು ಕೇಳಿದರು. ಸಾರಿಗೆ ಸಚಿವ, ಎಂ.ಡಿ., ಕೆಎಸ್‍ಆರ್‍ಟಿಸಿ ಡಿಸಿ ಮಟ್ಟದ ಅಧಿಕಾರಿಗಳು, ಉಪಕರಣ ಖರೀದಿ ಮಾಡುವವರು ನಷ್ಟಕ್ಕೆ ಕಾರಣ. ಅವರೇ ಹೊಣೆ ಹೊತ್ತುಕೊಳ್ಳಬೇಕು ಎಂದು ತಿಳಿಸಿದರು.