ಬೆಂಗಳೂರು : ನೆರೆಯ ಕೇರಳ ರಾಜ್ಯದ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ, ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು,
ಆದ್ಯ ಗಮನ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನಸಭೆಗೆ ತಿಳಿಸಿದರು.
ಅಪರಾಧಿಗಳ ಮೇಲೆ ಕಣ್ಗಾವಲು ಇಡಲು, ಸೂಕ್ಷ್ಮ ಪ್ರದೇಶಗಳಲ್ಲಿ, ಸಿಸಿ ಕ್ಯಾಮರಾಗಳನ್ನು ಆಳವಡಿಸುವ ಬಗ್ಗೆ ಪರೀಶಿಸಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ 2021ರಲ್ಲಿ ಒಟ್ಟು 1,684 ಅಪರಾಧ ಪ್ರಕರಣಗಳು ದಾಖಲಾಗಿದ್ದು, 1,617 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2022ರ ಆಗಸ್ಟ್ ತಿಂಗಳ ಅಂತ್ಯದ ವರೆಗೆ ಒಟ್ಟು 1,122 ಪ್ರಕರಣಗಳು ವರದಿಯಾಗಿವೆ ಹಾಗೂ 80 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಸದನಕ್ಕೆ ತಿಳಿಸಿದರು.