ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಶಾಸಕ ಮುನಿರತ್ನ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದ ಒಕ್ಕಲಿಗರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಕೆಂಗಲ್ ಹನುಮಂತಯ್ಯ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಮೂಲೆ ಮೂಲೆಗೆ ಕಾಲ್ನಡಿಗೆ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡುವ ಸಾಮರ್ಥ್ಯವಿದೆ. ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು.
ನಾಡಪ್ರಭು ಕೆಂಪೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಹೆಸರಿನಲ್ಲಿ ಇನ್ನೂ ಆಸ್ಪತ್ರೆಗಳು ಹೆಚ್ಚಾಗಬೇಕು. ಒಕ್ಕಲಿಗ ಸಮುದಾಯ ಸರ್ವರಿಗೂ ಸಹಾಯ ಮಾಡುವ ಸಮುದಾಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೆ ವೇಳೆ ಮಾತನಾಡಿದ ಒಕ್ಕಲಿಗ ಸಂಘದ ಅಧ್ಯಕ್ಷ ಅಪ್ಪಾಜಿಗೌಡ, ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಹೆಸರಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲು ಸಚಿವ ಡಿ.ಕೆ.ಶಿವಕುಮಾರ್ ಪ್ರೇರೆಪಿಸಿದ್ದರು ಎಂದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ