ಡಿ. 22ಕ್ಕೆ ಸಂಪುಟ ವಿಸ್ತರಣೆ ಪಕ್ಕಾ- ಸಿಎಲ್ ಪಿ ಸಭೆ ಬಳಿಕ ಸಿದ್ಧರಾಮಯ್ಯ ಹೇಳಿಕೆ
ಮಂಗಳವಾರ, 18 ಡಿಸೆಂಬರ್ 2018 (12:36 IST)
ಬೆಳಗಾವಿ : ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(ಸಿಎಲ್ ಪಿ) ಮುಕ್ತಾಯವಾಗಿದ್ದು, ಸಭೆ ಬಳಿಕ ಡಿ. 22ಕ್ಕೆ ಸಂಪುಟ ವಿಸ್ತರಣೆ ಪಕ್ಕಾ ಎಂದು ಸಿದ್ಧರಾಮಯ್ಯ ಅವರು ಹೇಳಿದ್ದಾರೆ.
ಶಾಸಕಾಂಗ ಪಕ್ಷದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಪ್ರಸ್ತಾಪ ಮಾಡಿದ್ದಾರೆ. ಡಿ. 22ಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡ್ತಿವಿ ಅಂತಾ ಹೇಳಿದ್ದೇವೆ. ಉ.ಕ ಭಾಗಕ್ಕೆ ಹೆಚ್ಚು ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇವೆ’ ಎಂದು ಹೇಳಿದ್ದಾರೆ.
ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ,ಶಾಸಕರಾದ ಸತೀಶ್ ಜಾರಕಿಹೋಳಿ, ರಾಮಲಿಂಗಾ ರೆಡ್ಡಿ, ರೋಷನ್ ಬೇಗ್,ಎಂ.ಬಿ.ಪಾಟೀಲ್, ನಾಗೇಂದ್ರ ಸೇರಿದಂತೆ ಹಲವರು ಗೈರಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.