ಚೆಕ್‌ನಲ್ಲಿ ಕಪ್ಪ ನೀಡಿದ್ದರೆ ದಾಖಲೆ ಬಿಡುಗಡೆ ಮಾಡಿ: ಕುಮಾರಸ್ವಾಮಿಗೆ ಡಿವಿಎಸ್ ಸವಾಲ್
ಗುರುವಾರ, 23 ಫೆಬ್ರವರಿ 2017 (15:52 IST)
ಬಿಜೆಪಿ ಸರಕಾರವಿದ್ದ ಅವಧಿಯಲ್ಲಿ ಚೆಕ್ ಮುಖಾಂತರ ಹೈಕಮಾಂಡ್‌ಗೆ ಕಪ್ಪ ಕಾಣಿಕೆಯನ್ನು ಕೊಟ್ಟಿರುವ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದಗೌಡ ಸವಾಲು ಹಾಕಿದ್ದಾರೆ.
ಜೆಡಿಎಸ್‌ಗೆ ಹೈಕಮಾಂಡ್ ಇಲ್ಲ. ಹೀಗಾಗಿ ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಬಗ್ಗೆ ಅವರು ಮಾತನಾಡೋದಕ್ಕೆ ಸಾಕಷ್ಟು ಅವಕಾಶ ಇದೆ. ಜೆಡಿಎಸ್ ಹೈಕಮಾಂಡ್ ಬೆಂಗಳೂರಿಗೆ ಮಾತ್ರ ಸೀಮಿತ ಎಂದು ವ್ಯಂಗ್ಯವಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನೆಯಿಂದ ರಾಜ್ಯ ಕಾಂಗ್ರೆಸ್ ನಾಯಕರು ಬೇಸತ್ತಿದ್ದು, ಶೀಘ್ರಧಲ್ಲಿಯೇ ಬಿಜೆಪಿ ಸೇರಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಅಧಿಕಾರ ಹಿಡಿಯುವುದು ಖಚಿತ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸ್ವಚ್ಚ ಪಾರದರ್ಶಕ ಅಡಳಿತವನ್ನು ಮೆಚ್ಚಿ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ಕೂಡಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಐದು ರಾಜ್ಯಗಳ ಚುನಾವಣೆಯ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ಇತರ ಪಕ್ಷಗಳ ಬಹುತೇಕ ಮುಖಂಡರು ಬಿಜೆಪಿಯತ್ತ ವಾಲಲಿದ್ದಾರೆ ಎಂದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.