ಸಿಎಂ ಹಣ ಪಡೆದಿಲ್ಲವೆಂದಾದ್ರೆ ಸಿಬಿಐಗೆ ವಹಿಸಲು ಹಿಂಜರಿಕೆ ಯಾಕೆ: ಈಶ್ವರಪ್ಪ
ಶುಕ್ರವಾರ, 3 ಮಾರ್ಚ್ 2017 (12:36 IST)
ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬ 65 ಕೋಟಿ ರೂ ಕಿಕ್ ಬ್ಯಾಕ್ ಪಡೆದಿಲ್ಲವೆಂದಾದಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲು ಯಾಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ನಿವಾಸದಲ್ಲಿ ಪತ್ತೆಯಾದ ಡೈರಿಯಲ್ಲಿ ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ 65 ಕೋಟಿ ರೂ.ಕಿಕ್ ಬ್ಯಾಕ್ ಪಡೆದಿರುವುದು ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಡೈರಿ ಪ್ರಕರಣ ಬಹಿರಂಗವಾದ ನಂತರ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈ ಬಿಟ್ಟಿದೆ. ಇದು ಬಿಜೆಪಿ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ಮಾರ್ಚ್ 9 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸೊರಬ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವ ಬಗ್ಗೆ ಪಕ್ಷ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.