ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ
ಇದೀಗ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಸೈಟಸ್ ಮಾಡಕಲಾಗುತ್ತಿದೆಸ. ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜನ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.
ಹಕ್ಕಿ ಜ್ವರ ಎಂದರೇನು: ಹೆಚ್5ಎನ್1 ವೈರಸ್ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವಿರುತ್ತದೆ. ಇನ್ನೂ ಮನುಷ್ಯರಲ್ಲಿ ಈ ರೋಗದ ಹರಡುವಿಕೆ ತುಂಬಾನೇ ವಿರಳ. ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು.