ರಾಮನಗರ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಇಂದು ಬೆಳಿಗ್ಗೆ ಬಂಧಿಸಲಾಗಿದೆ. ಬಂಧನದ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಜಿಲ್ಲೆಯ ಕನಕಪುರ ತಾಲ್ಲೂಕಿನ ಮಳಗಾಳಿನಲ್ಲಿ ವಾರದ ಹಿಂದೆ ದಲಿತ ಯುವಕನ ಕೈ ಕಡಿದ ಪ್ರಕರಣ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಳಿಸಿದ್ದರು. ಆರೋಪಿಗಳು ತಲೆಮರೆಸಿಕೊಂಡು ಓಡಾಡುತ್ತಿದ್ದರು.
ಕಗ್ಗಲಿಪುರ ಬಳಿಯ ವ್ಯಾಲಿ ಸ್ಕೂಲ್ ರಸ್ತೆ ಬಳಿ ಬಚ್ಚಿಟ್ಟುಕೊಂಡಿದ್ದರು. ಪ್ರಮುಖ ಆರೋಪಿಗಳಾದ ರೌಡಿ ಹರ್ಷ ಅಲಿಯಾಸ್ ಕೈಮ ಮತ್ತು ಕರುಣೇಶ್ ಅಲಿಯಾಸ್ ಕಣ್ಣನ ಕಾಲಿಗೆ ಪೊಲೀಸರು ಭಾನುವಾರ ಬೆಳಿಗ್ಗೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಅಲ್ಲೇ ಕುಸಿದು ಬಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದು, ಗಾಯಗೊಂಡಿರುವ ಆರೋಪಿಗಳಿಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಕನಕಪುರ ಟೌನ್ ಠಾಣೆ ಇನ್‌ಸ್ಪೆಕ್ಟರ್ ಮಿಥುನ್ ಶಿಲ್ಪಿ, ಗ್ರಾಮಾಂತರ ಇನ್‌ಸ್ಪೆಕ್ಟರ್ ಕೃಷ್ಣ ಲಮಾಣಿ, ಪಿಎಸ್‌ಐಗಳಾದ ಮನೋಹರ್, ರವಿಕುಮಾರ್, ಕಾನ್‌ಸ್ಟೆಬಲ್‌ಗಳಾದ ರಾಜಶೇಖರ್ ಹಾಗೂ ಶಿವಕುಮಾರ್ ಸ್ಥಳಕ್ಕೆ ತೆರಳಿದ್ದರು. ಬಂಧನಕ್ಕೆ 4 ತಂಡ ರಚಿಸಿದ್ದ ಎಸ್ಪಿ