ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೆಲವೇ ಕೆಲವು ಪ್ರಕರಣಗಳ ವರದಿ ಬರಬೇಕಿದೆ. ಅದಾದ ಬಳಿಕ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಈಗಾಗಲೇ ಸುಮಾರು 4,000 ಪುಟಗಳ ಚಾರ್ಜ್ ಶೀಟ್ ತಯಾರಾಗಿದೆ. ಇನ್ನುಳಿದ ಸಾಕ್ಷಿಗಳ ವಿವರ ಕಲೆ ಹಾಕಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ಇದಕ್ಕೆ ಮೊದಲು ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಎಸಿಪಿ ಚಂದನ್ ಗೃಹಸಚಿವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸದ್ಯಕ್ಕೆ ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದರೆ, ಇನ್ನಿತರ ಆರೋಪಿಗಳೂ ವಿವಿಧ ಜೈಲುಗಳಲ್ಲಿ ಕಂಬಿ ಎಣಿಸುತ್ತಿದ್ದಾರೆ.